ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಅಧಿಕ ತಾಪಮಾನದೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಸೆಪ್ಟೆಂಬರ್ 21ರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಸೂಚನೆಗಳಿವೆ. ಆದರೆ ವಾಯುಭಾರ ಕುಸಿತ ಚಲಿಸುವ ಪಥದ ಮೇಲೆ ಅವಲಂಬಿಸಿದೆ.
ಮಲೆನಾಡು : ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಬಾಳೆಹೊನ್ನೂರು ಸುತ್ತಮುತ್ತ ಭಾಗಗಳಲ್ಲಿ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದರೂ ಸೆಪ್ಟೆಂಬರ್ 18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ನಿರೀಕ್ಷೆ ಇದೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18 ಅಥವಾ 19ರಿಂದ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ತುಮಕೂರಿನ ಪಾವಗಢ ತಾಲೂಕಿನ ಬಹುತೇಕ ಭಾಗಗಳಲ್ಲಿ, ಚಾಮರಾಜನಗರದ ಕೊಳ್ಳೇಗಾಲ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದೆರಡು ಕಡೆ, ಚಿತ್ರದುರ್ಗ ಜಿಲ್ಲೆಯ ಆಂದ್ರಾ ಗಡಿಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.
ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರಂದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ, ಸೆಪ್ಟೆಂಬರ್ 19ರಿಂದ ಮಳೆಯ ವ್ಯಾಪ್ತಿ ಹಾಗೂ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.
ಮೇಲಿನ ಎಲ್ಲಾ ಮಳೆ ಸಾಧ್ಯತೆಗಳೂ ಈಗಿನ ಶ್ರೀಲಂಕಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಸೆಪ್ಟೆಂಬರ್ 18ರಂದು ಅಂಡಮಾನ್ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತಗಳ ಮೇಲೆ ಅವಲಂಬಿಸಿದೆ.
No comments:
Post a Comment