Advertise

16 September 2026

17.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಸೆಖೆಯೊಂದಿಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಸಂಜೆಯ ವೇಳೆಗೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 21ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ. ( ಮ್ಯಾನ್ಮಾರ್ ಕರಾವಳಿಯಲ್ಲಿ ಚಂಡಮಾರುತ ಉಂಟಾದರೆ ಮಾತ್ರ)

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಸಕ್ಲೇಶ್ಪುರ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 20ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿದು ನಂತರ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.
( ಮ್ಯಾನ್ಮಾರ್ ಕರಾವಳಿಯಲ್ಲಿ ಚಂಡಮಾರುತ ಉಂಟಾದರೆ ಮಾತ್ರ).

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ರಾಯಚೂರು, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಮಾತ್ರ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18ರಿಂದ ಮಳೆಯ ವ್ಯಾಪ್ತಿ ಹಾಗೂ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ, ಹಾಸನ, ಚಾಮರಾಜನಗರದ ಕೊಳ್ಳೇಗಾಲ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಮಾತ್ರ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, ಸೆಪ್ಟೆಂಬರ್ 20ರಿಂದ ಮಳೆಯ ವ್ಯಾಪ್ತಿ ಹಾಗೂ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.

ಈಗಿನ ಶ್ರೀಲಂಕಾದ ಕರಾವಳಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಅಂಡಮಾನ್ ಬಳಿ ಇವತ್ತು ಶಿಥಿಲಗೊಳ್ಳುವ ಲಕ್ಷಣಗಳಿದ್ದು, ಸೆಪ್ಟೆಂಬರ್ 19ರಂದು ಮ್ಯಾನ್ಮಾರ್ ಪಶ್ಚಿಮ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಇದು ಚಂಡಮಾರುತವಾಗಿ ಪರಿವರ್ತನೆಗೊಂಡು ಒಡಿಸ್ಸಾ ಕರಾವಳಿ ಸಮೀಪ ಸಾಗುವ ನಿರೀಕ್ಷೆ ಇದೆ.
ಈ ವಾಯುಭಾರ ಅಥವಾ ಚಂಡಮಾರುತವು ನಿರೀಕ್ಷೆಗಿಂತ ಮೊದಲೇ ದುರ್ಬಲಗೊಂಡರೆ ಮಳೆಯ ಸಾಧ್ಯತೆಗಳು ಕಡಿಮೆಯಾಗಬಹುದು 

No comments:

Post a Comment

21.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹ...