Advertise

17 September 2026

18.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಇವತ್ತಿನಿಂದ ರಾಜ್ಯದಾದ್ಯಂತ ಉತ್ತಮ ಮಳೆಯ ಮುನ್ಸೂಚನೆಗಳಿವೆ. 
ಅಧಿಕ ತಾಪಮಾನದ ಕಾರಣದಿಂದ ಅಲ್ಲಲ್ಲಿ ಗುಡುಗು ಸಾಧ್ಯತೆಗಳಿವೆ. 

ಕರಾವಳಿ : ಇವತ್ತು ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಮಂಗಳೂರು ಸುತ್ತಮುತ್ತ ಭಾಗಗಳಲ್ಲಿ ಮುಂಜಾನೆ ತುಂತುರು ಮಳೆಯಾಗಿದೆ. 
ಮುನ್ಸೂಚನೆಯಂತೆ ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಸೆಖೆಯೊಂದಿಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇದೆ. ಮೋಡ ಸ್ವಲ್ಪ ಹೆಚ್ಚಿರಲಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಸಣ್ಣ ಪ್ರಮಾಣದ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 2 ದಿವಸಗಳ ಕಾಲ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿದ್ದು, ಸೆಪ್ಟೆಂಬರ್ 19ರಿಂದ ಉತ್ತರ ಕನ್ನಡ ಹಾಗೂ ಸೆಪ್ಟೆಂಬರ್ 20ರಿಂದ ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹ ಇರಬಹುದು. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 2 ದಿವಸಗಳ ಕಾಲ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, ಸೆಪ್ಟೆಂಬರ್ 20ರಿಂದ ಮಳೆಯ ಪ್ರಮಾಣವು ಹೆಚ್ಚಾಗುವ ನಿರೀಕ್ಷೆ ಇದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಹಾಗೂ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಇದೇ ವಾತಾವರಣ ಮುಂದುವರಿಯುವ ಸೂಚನೆಗಳಿವೆ. 

ಸೆಪ್ಟೆಂಬರ್ 19ರಂದು ಬಂಗಾಳಕೊಲ್ಲಿಯ ಮ್ಯಾನ್ಮಾರ್ ಪಶ್ಚಿಮ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ಪ್ರಭಲಗೊಂಡು, 23ರಂದು ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಲಕ್ಷಣಗಳಿವೆ. ಈಗಿನಂತೆ ಸೆಪ್ಟೆಂಬರ್ 2ರಂದು ಒಡಿಸ್ಸಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ.

No comments:

Post a Comment

21.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹ...