Advertise

18 September 2026

19.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ :ಕಾಸರಗೋಡು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಇದ್ದರೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸೆಪ್ಟೆಂಬರ್ 21ರಿಂದ ಮಳೆಯ ಮುನ್ಸೂಚನೆ ಇದೆ ಹಾಗೂ ಈ ತಿಂಗಳ ಅಂತ್ಯದ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಸಕ್ಲೇಶ್ಪುರ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಸ್ವಲ್ಪ ಕಡಿಮೆ ಇರಬಹುದು. 
ಈಗಿನಂತೆ  ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27 ಅಥವಾ 28ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ವಿಜಯಪುರ, ಕೊಪ್ಪಳ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 19ರಿಂದ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು, 26ರ ತನಕವೂ ಮುಂದುವರಿಯುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ) ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 19ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 28ರ ತನಕವೂ ಮುಂದುವರಿಯುವ ಸಾಧ್ಯತೆಗಳಿವೆ. 

ಬಂಗಾಳಕೊಲ್ಲಿಯ ಮ್ಯಾನ್ಮಾರ್ ಕರಾವಳಿಯಲ್ಲಿ 19ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಮುಂದಿನ 2 ದಿವಸಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಲಕ್ಷಣಗಳಿವೆ.  ಸೆಪ್ಟೆಂಬರ್ 25ರ ಸುಮಾರಿಗೆ ಒಡಿಸ್ಸಾ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಇದು ಶಿಥಿಲಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಮಳೆಯ ಪ್ರಮಾಣವೂ ಕ್ಷೀಣಿಸಲಿದೆ. 

No comments:

Post a Comment

22.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಅರಬ್ಬಿ...