ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಮಾಣವು ಕಡಿಮೆಯಾಗಿ, ಉತ್ತರ ಭಾರತದ ಕಡೆಯಿಂದ ಹೆಚ್ಚಿನ ಪ್ರಮಾಣದ ಗಾಳಿ ಬೀಸುತ್ತಿರುವ ಕಾರಣ ರಾಜ್ಯದಲ್ಲಿ ಮುನ್ಸೂಚನೆಯಲ್ಲಿ ಇರುವಷ್ಟು ಮಳೆಯಾಗುತ್ತಿಲ್ಲ. ಸೀಮಿತ ಪ್ರದೇಶಗಳಲ್ಲಿ ಮಾತ್ರ ಉತ್ತಮ ಮಳೆ ಇರಬಹುದು.
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಕಡಿಮೆಯಾಗಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 25ರ ತನಕ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿದ್ದರೂ ಜೋರು ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.
ಮಲೆನಾಡು : ಕೊಡಗು, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 23ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜೋರು ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಹೆಚ್ಚಿನ ಎಲ್ಲಾ ಜಿಲ್ಲೆಗಳಲ್ಲೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡಿನ ಸೆಪ್ಟೆಂಬರ್ 23ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆಗಳು ಕಡಿಮೆಯಾಗಿದ್ದು, ಸೆಪ್ಟೆಂಬರ್ 23ರ ರಾತ್ರಿ ಆಂದ್ರಾ ಕರಾವಳಿಗೆ ಪ್ರವೇಶಿಸುವ ಸಾಧ್ಯತೆಗಳಿದ್ದು, ಅಲ್ಲಿಂದ ಉತ್ತರ-ಪೂರ್ವಾಭಿಮುಖವಾಗಿ (ಈಶಾನ್ಯ ಕಡೆಗೆ) ಚಲಿಸುವ ಲಕ್ಷಣಗಳಿವೆ. ಈ ವಾಯುಭಾರ ಕುಸಿತವು ಉತ್ತರ ಭಾರತದ ಕಡೆಯಿಂದ ಗಾಳಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಸೆಳೆಯುತ್ತಿರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.
No comments:
Post a Comment