ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರ್ನಾಟಕ - ಕೇರಳದ ಗಡಿ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಮಳೆಯ ಸಾಧ್ಯತೆಗಳಿವೆ ಕಡಿಮೆಯಾಗಿದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರಂದು ಒಂದು ಸಣ್ಣ ಅವಕಾಶ ಬಿಟ್ಟರೆ ಉಳಿದಂತೆ ಈ ತಿಂಗಳು ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.
ಮಲೆನಾಡು : ಕೊಡಗು, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕ್ಷೀಣಿಸುತ್ತಿದ್ದು, ಸೆಪ್ಟೆಂಬರ್ 29ರಿಂದ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯ ಸಾಧ್ಯತೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 23ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಉತ್ತರ ಆಂದ್ರಾ ಕರಾವಳಿಗೆ ಪ್ರವೇಶಿಸಿ ಅಲ್ಲಿಂದ ಉತ್ತರಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ.
ಮೇಲ್ಸ್ತರದಲ್ಲಿ ರಾಜ್ಯದ ಉತ್ತರ ಒಳನಾಡು ಭಾಗಗಳಲ್ಲಿ ಮಾತ್ರ ಈ ವಾಯುಭಾರ ಕುಸಿತ ಪರಿಣಾಮ ಕಾಣುತ್ತಿದ್ದು, ಉಳಿದ ಭಾಗಗಳಲ್ಲಿ ಗಾಳಿಯ ಚಲನೆಯು ಕ್ಷೀಣಿಸಿದೆ. ಮಧ್ಯಮ ಸ್ತರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಅಷ್ಟೇನು ಗೋಚರಿಸುತ್ತಿಲ್ಲ.
No comments:
Post a Comment