ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಹೆಚ್ಚು ಸೆಖೆಯೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಒಂದ ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 26ರ ತನಕ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾದರೂ ಸೆಪ್ಟೆಂಬರ್ 30ರಿಂದ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.
ಮಲೆನಾಡು : ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಕೊಡಗು, ಹಾಸನದ ಸಕ್ಲೇಶ್ಪುರ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಆದರೆ ಸೆಪ್ಟೆಂಬರ್ 30ರಿಂದ ಗುಡುಗು ಸಹಿತ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 25ರಿಂದ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗಿದ್ದು, ಇನ್ನು ಒಕ್ಟೊಬರ್ 1ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ ಕರಾವಳಿಗೆ ಪ್ರವೇಶಿಸಲಿದ್ದು, ಅಲ್ಲಿಂದ ಉತ್ತರ ಚಲಿಸಿ ಸುಮಾರು ಸೆಪ್ಟೆಂಬರ್ 28, 29ರಂದು ಉತ್ತರ ಪ್ರದೇಶ ರಾಜ್ಯದ ಮೂಲಕ ನೇಪಾಳ ಪ್ರವೇಶಿಸಿ, ಸೆಪ್ಟೆಂಬರ್ 30ರಂದು ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದೇ ಸಮಯದಲ್ಲಿ ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.
No comments:
Post a Comment