Advertise

24 September 2026

25.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಕಡಿಮೆ ಇದ್ದು, ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದಲೆ ಮಳೆಯಾಗುತ್ತಿದ್ದು, ರಾಜ್ಯದ ಕರಾವಳಿ ತೀರ ಭಾಗಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರಬಹುದು. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 26ರ ತನಕ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆಗಳಿದ್ದು, 29ರಿಂದ ಘಟ್ಟದ ಕೆಳಗಿನ ಪ್ರದೇಶಗಳಿಂದ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ  ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ  ಸೆಪ್ಟೆಂಬರ್ 27ರ ತನಕ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು (ಶಿವಮೊಗ್ಗ ಜಿಲ್ಲೆಯಲ್ಲಿ 25ರಂದು ಸಹ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ), 28 ಅಥವಾ 29ರಿಂದ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.

ಉತ್ತರ ಒಳನಾಡು :  ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 25ರಿಂದ ಮಳೆ ಕಡಿಮೆಯಾಗಿ, 29ರಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ 25ರಿಂದ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿದ್ದು, 29ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ. 

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಉತ್ತರ ಆಂದ್ರಾ ಮೂಲಕ ಭೂ ಪ್ರವೇಶಿಸಿ, ಉತ್ತರಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ.
ಛತ್ತೀಸಗಡ, ಮಧ್ಯಪ್ರದೇಶ, ಉತ್ತರ ಪ್ರದೇಶ ಮೂಲಕ ಪಯಣಿಸಲಿರುವ ಈ ವಾಯುಭಾರ ಕುಸಿತವು, ಸುಮಾರು ಸೆಪ್ಟೆಂಬರ್ 29 ಅಥವಾ 30ರಿಂದ ಹಿಮಾಚಲ ಪ್ರದೇಶ ತಲುಪಿ ಶಿಥಿಲಗೊಳ್ಳುವ ಲಕ್ಷಣಗಳಿವೆ. 
ಇದು ಶಿಥಿಲಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಹಿಂಗಾರು ರೀತಿಯ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ. 

No comments:

Post a Comment

05.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...