Advertise

26 September 2026

27.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕರಾವಳಿ ತೀರ ಭಾಗಗಳ ಅಲ್ಲಲ್ಲಿ ಹಾಗೂ ಕರ್ನಾಟಕ ಕೇರಳ ಗಡಿಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 28ರಿಂದ ಹಿಂಗಾರು ರೀತಿಯ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕುದುರೆಮುಖ, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಉಳಿದ ಭಾಗಗಳಲ್ಲಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸೆಪ್ಟೆಂಬರ್ 28ರಿಂದ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಧಾರವಾಡ, ಗದಗ, ವಿಜಾಪುರ, ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 29, 30ರಂದು ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಉಳಿದಂತೆ ಇತರ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಹಾಸನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 28ರಿಂದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. 

ಈಗಿನ ವಾಯುಭಾರ ಕುಸಿತವು ಉತ್ತರ ಪ್ರದೇಶದ ಉತ್ತರ ಭಾಗಗಳಲ್ಲಿ, ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಭಾರಿ ಮಳೆಗೆ ಕಾರಣವಾಗಿದ್ದು, ಮುಂದಿನ 2 ದಿವಸಗಳಲ್ಲಿ ಅಲ್ಲಿಯೇ ಶಿಥಿಲಗೊಳ್ಳುವ ಲಕ್ಷಣಗಳಿವೆ. 
ಇದರ ಜೊತೆಗೆ ಬಂಗಾಳಕೊಲ್ಲಿಯ ಥೈಲ್ಯಾಂಡ್, ಮ್ಯಾನ್ಮಾರ್ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸೆಪ್ಟೆಂಬರ್ 29,30ರಂದು ಅಲ್ಲಿಯೇ ಶಿಥಿಲಗೊಳ್ಳುವ ಲಕ್ಷಣಗಳಿವೆ. 
ಮುಂಗಾರು ಅಧಿಕೃತವಾಗಿ ಸಂಪೂರ್ಣ ಹಿಂದೆ ಸರಿದಿಲ್ಲದ ಕಾರಣ ಹಿಂಗಾರು ಮಳೆ ಆರಂಭವಾಗಿಲ್ಲ. 
ಸೆಪ್ಟೆಂಬರ್ 28ರಿಂದ ಮುಂದಿನ ಒಂದು ವಾರದ ತನಕ ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ, ತಮಿಳುನಾಡು ಕರಾವಳಿ ಮೂಲಕ ಭೂ ಪ್ರವೇಶಿಸುತ್ತಿರುವುದರಿಂದ ರಾಜ್ಯದಲ್ಲಿ ಹಿಂಗಾರು ರೀತಿಯ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. 


No comments:

Post a Comment

05.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...