Advertise

28 September 2026

29.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಭಾರಿ ಸೆಖೆಯ ವಾತಾವರಣದೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಪೂರ್ವದ ಗಾಳಿಯ ಪ್ರಭಾವ ಹೆಚ್ಚಿದ್ದರೆ ಮಾತ್ರ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. 
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸೆಖೆಯೊಂದಿಗೆ ಮೋಡದ ವಾತಾವರಣ ಇರಲಿದ್ದು, ಸಂಜೆ ಘಟ್ಟದ ಕೆಳಗಿನ ಪ್ರದೇಶಗಳ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಉಳಿದ ಭಾಗಗಳಲ್ಲಿ ಗಾಳಿಯ ಪ್ರಭಾವ ಹೆಚ್ಚಿದ್ದರೆ ಮಾತ್ರ ಮಳೆ ಇರಬಹುದು. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಕಾಣುತ್ತಿದೆ. 

ಮಲೆನಾಡು : ಕೊಡಗು, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಗುಡುಗು ಮಳೆಯ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಹಾವೇರಿ, ಧಾರವಾಡ ಹಾಗೂ ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 29ರಂದು ಮಾತ್ರ ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ನಂತರ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ತುಮಕೂರು (ಪಾವಗಡ ಸಹಿತ) ಜಿಲ್ಲೆಯ ಅಲ್ಲಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು, ಇವತ್ತು ಮಧ್ಯಾಹ್ನ ನಂತರ, ಸಂಜೆ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 6ರ ತನಕ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. 

ಬಂಗಾಳಕೊಲ್ಲಿಯ ಥೈಲ್ಯಾಂಡ್, ಮ್ಯಾನ್ಮಾರ್ ಕರಾವಳಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಈಗಾಗಲೇ ಶಿಥಿಲಗೊಳ್ಳುತ್ತಿದೆ. 
ಅರಬ್ಬಿ ಸಮುದ್ರ ಕಡೆಯಿಂದ ಗಾಳಿಯು ಶ್ರೀಲಂಕಾ, ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಆಗಮಿಸುತ್ತಿರುವ ಕಾರಣ ರಾಜ್ಯದಲ್ಲಿ ಈಗಿನ ಮಳೆಯ ವಾತಾವರಣವು ಸೃಷ್ಟಿಯಾಗಿದೆ. ಹಿಂಗಾರು ಮಾರುತಗಳು ಇನ್ನಷ್ಟೇ ಬರಬೇಕಾಗಿದೆ. 
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ರಾಜ್ಯದಲ್ಲಿ ಅಧಿಕೃತವಾಗಿ ಒಕ್ಟೊಬರ್ 15ರ ಸುಮಾರಿಗೆ ಮುಂಗಾರು ಹಿಂದೆ ಸರಿಯುವ ಸಾಧ್ಯತೆಗಳಿವೆ. 




No comments:

Post a Comment

05.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...