Advertise

29 September 2026

30.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆದರೆ ಶ್ರೀಲಂಕಾ ಹಾಗೂ ತಮಿಳುನಾಡು ಕಡೆಯಿಂದ ಬೀಸಿ ಬರುತ್ತಿರುವ ಗಾಳಿಗೆ ಮಲೆನಾಡು ಭಾಗಗಳಲ್ಲಿ ಅರಬ್ಬಿ ಸಮುದ್ರದ ಗಾಳಿ ತಡೆಯಾಗಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ನಿರೀಕ್ಷೆತ ಮೋಡಗಳು ಜಮೆಯಾಗುತ್ತಿಲ್ಲ. ತಮಿಳುನಾಡು ಕಡೆಯ ಗಾಳಿ ಪ್ರಭಲಗೊಂಡರೆ ಮಾತ್ರ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಒಕ್ಟೊಬರ್ 6ರ ತನಕ ಮಳೆಯ ಸಾಧ್ಯತೆಗಳು ಕಾಣುತ್ತಿದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 6ರ ತನಕ ಮಳೆಯ ನಿರೀಕ್ಷೆ ಇದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಈಗಾಗಲೇ ಮಳೆಯಾಗುತ್ತಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 2ರ ತನಕ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ, ಚಿತ್ರದುರ್ಗ, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 6ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವುದರಿಂದ ಈ ಮಳೆಯಾಗುತ್ತಿದೆ. ಸುಮಾರು ಒಕ್ಟೊಬರ್ 6ರ ನಂತರ ಈ ಗಾಳಿಯ ಪ್ರಭಾವ ಕಡಿಮೆಯಾಗುವ ಲಕ್ಷಣಗಳಿವೆ. 

No comments:

Post a Comment

05.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...