Advertise

04 October 2026

05.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆ, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಒಕ್ಟೊಬರ್ 11ರ ತನಕ ಮಳೆಯ ನಿರೀಕ್ಷೆ ಇದೆ. 

ಮಲೆನಾಡು : ಕೊಡಗು, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 10 ಅಥವಾ 11ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯಲಿದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ? ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ), ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 6ರ ತನಕ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ. 

ಅರಬ್ಬಿ ಸಮುದ್ರದಲ್ಲಿ ರಾಜ್ಯದ ಕರಾವಳಿ ಸಮೀಪ ಮೇಲ್ಮೈ ಸುಳಿಗಾಳಿ ಉಂಟಾಗಿದ್ದರ ಪರಿಣಾಮದಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಕ್ಟೊಬರ್ 11ರ ನಂತರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

03 October 2026

04.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

04.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಸೆಖೆಯ ವಾತಾವರಣದೊಂದಿಗೆ ಬಿಸಿಲು, ಮೋಡದ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಖೆ, ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ( ಭಾರಿ ಸೆಖೆಯ ಕಾರಣದಿಂದಾಗಿ ಈಗಿನ ಮಳೆಯೊಂದಿಗೆ ಅತಿ ವೇಗದ ಬಿರುಗಾಳಿಯೂ ಬೀಸುತ್ತಿದೆ) 
ಆದರೆ ಸಂಜೆಯಾಗುತ್ತಲೆ ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿ ಪ್ರಭಲಗೊಳ್ಳುವಂತೆ ತೋರುತ್ತಿದ್ದು, ಸಂಜೆಯ ನಂತರ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಲೆನಾಡಿನ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. ಅರಬ್ಬಿ ಸಮುದ್ರದ ಗಾಳಿಯ ಪ್ರಭಾವ ಹೆಚ್ಚಿದ್ದರೆ ಇತರ ಭಾಗಗಳಲ್ಲಿಯೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.

ಉತ್ತರ ಒಳನಾಡು : ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮದಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಾಣಿಸುತ್ತಿಲ್ಲ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 4ರಿಂದ ಪರಿಸ್ಥಿತಿ ಬದಲಾಗುವ ಲಕ್ಷಣಗಳಿವೆ. ಬಂಗಾಳಕೊಲ್ಲಿಯ ಗಾಳಿಯು ಪ್ರಭಲಗೊಳ್ಳುವ ಸೂಚನೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೋಲಾರ ತಮಿಳುನಾಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 4ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ. 

ಬಂಗಾಳಕೊಲ್ಲಿಯ ಕಡೆಯಿಂದ ತಮಿಳುನಾಡು ಮೂಲಕ ಉತ್ತಮ ತೇವಾಂಶದ ಗಾಳಿಯು ಮುಂದಿನ ಮೂರು, ನಾಲ್ಕು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು ಕಡೆಗೆ ಬೀಸುವ ಲಕ್ಷಣಗಳಿರುವುದರಿಂದ ಉತ್ತಮ ಮಳೆಯ ಸಾಧ್ಯತೆಗಳಿವೆ. 


02 October 2026

03.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


03.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ನಿನ್ನೆ ಸುಳ್ಯ ತಾಲ್ಲೂಕು ಹಲವು ಕಡೆ 100mm ಗಳಷ್ಟು ಹಾಗೂ ಕೆಲವು ಕಡೆ ಅಧಿಕ  ಮಳೆಯಾಗಿದೆ.
ಇಂದು ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕಾರ್ಕಳ, ಬಜಗೋಳಿ ಸುತ್ತಮುತ್ತ ಸ್ವಲ್ಪ ಹೆಚ್ಚಿರಬಹುದು. ಗಾಳಿಯ ಒತ್ತಡ ಹೆಚ್ಚಿದ್ದರೆ ಕಾಸರಗೋಡು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಆದರೆ ಬದಲಾಗಬಹುದು. 

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಬಾಳೆಹೊನ್ನೂರು ಸುತ್ತಮುತ್ತ ಭಾಗಗಳಲ್ಲಿ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ  ರಾಜ್ಯದ ಮಲೆನಾಡು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಕಾಣುತ್ತಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಉತ್ತರ ಭಾರತದ ಕಡೆಯಿಂದ ಶುಶ್ಕ ಗಾಳಿ ಬೀಸುತ್ತಿರುವ ಕಾರಣ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರಿನ ಕೊಡಗು ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮದಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿಲ್ಲ. 

ಮೇಲ್ಸ್ತರ ಹಾಗೂ ಮಧ್ಯಮ ಸ್ತರಗಳಲ್ಲಿ ಉತ್ತರ ಭಾರತದ ಕಡೆಯಿಂದ ರಾಜ್ಯಕ್ಕೆ ಬೀಸುತ್ತಿರುವ ಶುಷ್ಕ ಗಾಳಿ ಮುಂದುವರಿಯುವ ಲಕ್ಷಣಗಳಿವೆ. 
ಒಕ್ಟೊಬರ್ 15ರ ನಂತರ ಪರಿಸ್ಥಿತಿ ಬದಲಾಗಬಹುದು. ಆದರೂ ಕಾದು ನೋಡಬೇಕಾಗಿದೆ. ಮುಂಗಾರು ಹೆಚ್ಚಿನ ಪಾಲೂ ರಾಜ್ಯದಿಂದ ಹಿಂದೆ ಸರಿದಿದ್ದು, ಒಕ್ಟೊಬರ್ 15ರ ನಂತರ ಹಿಂಗಾರು ಆಗಮನದ ನಿರೀಕ್ಷೆ ಇದೆ. ಆದರೆ ಪೆಸಿಫಿಕ್ ಸಾಗರದ ಬೃಹತ್ ಚಂಡಮಾರುತದ ಕಾರಣದಿಂದ ಹಿಂಗಾರಿನ ಸ್ಥಿತಿ ಕಾದು ನೋಡಬೇಕಾಗಿದೆ. 

01 October 2026

02.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸೂಚನೆಗಳಿದ್ದರೂ ಬಂಗಾಳಕೊಲ್ಲಿಯ ಗಾಳಿಯ ಪ್ರಭಾವದ ಮೇಲೆ ಅವಲಂಬಿಸಿದೆ. ಉತ್ತರ ಭಾರತದ ಕಡೆಯಿಂದ ಶುಶ್ಕ ಗಾಳಿಯೂ ಬೀಸುತ್ತಿದೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳ ಕೊಡಗು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪ್ರಭಾವ ಹೆಚ್ಚಿದ್ದರೆ ಮಳೆಯ ಸಾಧ್ಯತೆಗಳು ಕಡಿಮೆಯಾಗಬಹುದು.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮದಿಂದ ಮಳೆಯ ಸಾಧ್ಯತೆಗಳು ಕ್ಷೀಣಿಸುತ್ತಿದೆ.
ಈಗಿನಂತೆ ಪೆಸಿಫಿಕ್ ಸಾಗರದ ಬೃಹತ್ ಚಂಡಮಾರುತಗಳು ಬಂಗಾಳಕೊಲ್ಲಿಯ ಗಾಳಿಯನ್ನು ಆ ಕಡೆಗೆ ಸೆಳೆಯಲ್ಪಡುವುದರಿಂದ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಹಾಸನ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ. 

ಪೆಸಿಫಿಕ್ ಸಾಗರದ ಪ್ರಭಲ ಚಂಡಮಾರುತಗಳು ಬಂಗಾಳಕೊಲ್ಲಿಯ ಗಾಳಿಯನ್ನು ಆ ಕಡೆಗೆ ಸೆಳೆಯಲ್ಪಡುವುದರಿಂದ ರಾಜ್ಯದಲ್ಲಿ ದಕ್ಷಿಣ ಕರಾವಳಿ ಹಾಗೂ ಕೊಡಗು ಜಿಲ್ಲೆಗಳನ್ನು ಹೊರತು ಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗಬಹುದು. ಇದರ ಜೊತೆಗೆ ಉತ್ತರ ಭಾರತದ ಕಡೆಯಿಂದ ಶುಶ್ಕ ಗಾಳಿಯೂ ರಾಜ್ಯದ ಕಡೆಗೆ ಬೀಸುತ್ತಿದೆ. 

05.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...