ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಹಾಗೂ ರಾತ್ರಿ ಮೋಡ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 1ರಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ಹಾಗೂ ಸಂಜೆ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 1ರಿಂದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಸೂಚನೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 1ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಆಂದ್ರಾ, ತಮಿಳುನಾಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 1ರಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ತಿರುಗುವಿಕೆಯು. ನವೆಂಬರ್ 2ರಂದು ಈಗಿನ ಸ್ಥಿತಿಗಿಂತ ದುರ್ಬಲಗೊಂಡು ಆಂದ್ರಾದ ನೆಲ್ಲೂರು ಕರಾವಳಿಯಲ್ಲಿ ಭೂ ಪ್ರವೇಶಿಸುವ ಸಾಧ್ಯತೆಗಳಿವೆ.
ಈ ತಿರುಗುವಿಕೆಯು ಮತ್ತಷ್ಟು ಪಶ್ಚಿಮಕ್ಕೆ ಚಲಿಸಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ಬಂಗಾಳಕೊಲ್ಲಿಯಲ್ಲಿ ಹಿಂಗಾರು ಮಾರುತಗಳ ಚಟುವಟಿಕೆ ಚುರುಕುಗೊಳ್ಳುವ ಸಾಧ್ಯತೆಗಳಿವೆ.
No comments:
Post a Comment