ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸೂಚನೆಗಳಿದ್ದರೂ ಬಂಗಾಳಕೊಲ್ಲಿಯ ಗಾಳಿಯ ಪ್ರಭಾವದ ಮೇಲೆ ಅವಲಂಬಿಸಿದೆ. ಉತ್ತರ ಭಾರತದ ಕಡೆಯಿಂದ ಶುಶ್ಕ ಗಾಳಿಯೂ ಬೀಸುತ್ತಿದೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳ ಕೊಡಗು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪ್ರಭಾವ ಹೆಚ್ಚಿದ್ದರೆ ಮಳೆಯ ಸಾಧ್ಯತೆಗಳು ಕಡಿಮೆಯಾಗಬಹುದು.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮದಿಂದ ಮಳೆಯ ಸಾಧ್ಯತೆಗಳು ಕ್ಷೀಣಿಸುತ್ತಿದೆ.
ಈಗಿನಂತೆ ಪೆಸಿಫಿಕ್ ಸಾಗರದ ಬೃಹತ್ ಚಂಡಮಾರುತಗಳು ಬಂಗಾಳಕೊಲ್ಲಿಯ ಗಾಳಿಯನ್ನು ಆ ಕಡೆಗೆ ಸೆಳೆಯಲ್ಪಡುವುದರಿಂದ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಹಾಸನ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.
ಪೆಸಿಫಿಕ್ ಸಾಗರದ ಪ್ರಭಲ ಚಂಡಮಾರುತಗಳು ಬಂಗಾಳಕೊಲ್ಲಿಯ ಗಾಳಿಯನ್ನು ಆ ಕಡೆಗೆ ಸೆಳೆಯಲ್ಪಡುವುದರಿಂದ ರಾಜ್ಯದಲ್ಲಿ ದಕ್ಷಿಣ ಕರಾವಳಿ ಹಾಗೂ ಕೊಡಗು ಜಿಲ್ಲೆಗಳನ್ನು ಹೊರತು ಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗಬಹುದು. ಇದರ ಜೊತೆಗೆ ಉತ್ತರ ಭಾರತದ ಕಡೆಯಿಂದ ಶುಶ್ಕ ಗಾಳಿಯೂ ರಾಜ್ಯದ ಕಡೆಗೆ ಬೀಸುತ್ತಿದೆ.
No comments:
Post a Comment