Advertise

02 October 2026

03.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


03.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ನಿನ್ನೆ ಸುಳ್ಯ ತಾಲ್ಲೂಕು ಹಲವು ಕಡೆ 100mm ಗಳಷ್ಟು ಹಾಗೂ ಕೆಲವು ಕಡೆ ಅಧಿಕ  ಮಳೆಯಾಗಿದೆ.
ಇಂದು ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕಾರ್ಕಳ, ಬಜಗೋಳಿ ಸುತ್ತಮುತ್ತ ಸ್ವಲ್ಪ ಹೆಚ್ಚಿರಬಹುದು. ಗಾಳಿಯ ಒತ್ತಡ ಹೆಚ್ಚಿದ್ದರೆ ಕಾಸರಗೋಡು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಆದರೆ ಬದಲಾಗಬಹುದು. 

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಬಾಳೆಹೊನ್ನೂರು ಸುತ್ತಮುತ್ತ ಭಾಗಗಳಲ್ಲಿ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ  ರಾಜ್ಯದ ಮಲೆನಾಡು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಕಾಣುತ್ತಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಉತ್ತರ ಭಾರತದ ಕಡೆಯಿಂದ ಶುಶ್ಕ ಗಾಳಿ ಬೀಸುತ್ತಿರುವ ಕಾರಣ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರಿನ ಕೊಡಗು ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮದಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿಲ್ಲ. 

ಮೇಲ್ಸ್ತರ ಹಾಗೂ ಮಧ್ಯಮ ಸ್ತರಗಳಲ್ಲಿ ಉತ್ತರ ಭಾರತದ ಕಡೆಯಿಂದ ರಾಜ್ಯಕ್ಕೆ ಬೀಸುತ್ತಿರುವ ಶುಷ್ಕ ಗಾಳಿ ಮುಂದುವರಿಯುವ ಲಕ್ಷಣಗಳಿವೆ. 
ಒಕ್ಟೊಬರ್ 15ರ ನಂತರ ಪರಿಸ್ಥಿತಿ ಬದಲಾಗಬಹುದು. ಆದರೂ ಕಾದು ನೋಡಬೇಕಾಗಿದೆ. ಮುಂಗಾರು ಹೆಚ್ಚಿನ ಪಾಲೂ ರಾಜ್ಯದಿಂದ ಹಿಂದೆ ಸರಿದಿದ್ದು, ಒಕ್ಟೊಬರ್ 15ರ ನಂತರ ಹಿಂಗಾರು ಆಗಮನದ ನಿರೀಕ್ಷೆ ಇದೆ. ಆದರೆ ಪೆಸಿಫಿಕ್ ಸಾಗರದ ಬೃಹತ್ ಚಂಡಮಾರುತದ ಕಾರಣದಿಂದ ಹಿಂಗಾರಿನ ಸ್ಥಿತಿ ಕಾದು ನೋಡಬೇಕಾಗಿದೆ. 

No comments:

Post a Comment

05.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...