Advertise

03 October 2026

04.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

04.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಸೆಖೆಯ ವಾತಾವರಣದೊಂದಿಗೆ ಬಿಸಿಲು, ಮೋಡದ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಖೆ, ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ( ಭಾರಿ ಸೆಖೆಯ ಕಾರಣದಿಂದಾಗಿ ಈಗಿನ ಮಳೆಯೊಂದಿಗೆ ಅತಿ ವೇಗದ ಬಿರುಗಾಳಿಯೂ ಬೀಸುತ್ತಿದೆ) 
ಆದರೆ ಸಂಜೆಯಾಗುತ್ತಲೆ ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿ ಪ್ರಭಲಗೊಳ್ಳುವಂತೆ ತೋರುತ್ತಿದ್ದು, ಸಂಜೆಯ ನಂತರ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಲೆನಾಡಿನ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. ಅರಬ್ಬಿ ಸಮುದ್ರದ ಗಾಳಿಯ ಪ್ರಭಾವ ಹೆಚ್ಚಿದ್ದರೆ ಇತರ ಭಾಗಗಳಲ್ಲಿಯೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.

ಉತ್ತರ ಒಳನಾಡು : ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮದಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಾಣಿಸುತ್ತಿಲ್ಲ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 4ರಿಂದ ಪರಿಸ್ಥಿತಿ ಬದಲಾಗುವ ಲಕ್ಷಣಗಳಿವೆ. ಬಂಗಾಳಕೊಲ್ಲಿಯ ಗಾಳಿಯು ಪ್ರಭಲಗೊಳ್ಳುವ ಸೂಚನೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೋಲಾರ ತಮಿಳುನಾಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 4ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ. 

ಬಂಗಾಳಕೊಲ್ಲಿಯ ಕಡೆಯಿಂದ ತಮಿಳುನಾಡು ಮೂಲಕ ಉತ್ತಮ ತೇವಾಂಶದ ಗಾಳಿಯು ಮುಂದಿನ ಮೂರು, ನಾಲ್ಕು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು ಕಡೆಗೆ ಬೀಸುವ ಲಕ್ಷಣಗಳಿರುವುದರಿಂದ ಉತ್ತಮ ಮಳೆಯ ಸಾಧ್ಯತೆಗಳಿವೆ. 


No comments:

Post a Comment

05.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...