Advertise

05 October 2026

06.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

06.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಮುಂಜಾನೆಯಿಂದಲೇ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಹೈಚ್ಚಿದ್ದರೆ ಉಳಿದ ಭಾಗಗಳಲ್ಲಿ ಕಡಿಮೆ ಹಾಗೂ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ತುಂತುರು ಮಳೆ ಇರಬಹುದು. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಕಡಿಮೆ ಇರಬಹುದು. ಸಂಜೆ ಮತ್ತೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 11ರಿಂದ ಮಳೆಯ ಸಾಧ್ಯತೆಗಳು ಕಡಿಮೆಯಾಗುವ ಸೂಚನೆಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಜಾನೆಯಿಂದಲೇ ಅಲ್ಲಲ್ಲಿ  ಮಳೆಯಾಗುತ್ತಿದೆ. 
ಈಗಿನಂತೆ ಒಕ್ಟೊಬರ್ 6ರ ನಂತರ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಉತ್ತರ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಡಿಮೆ ಇರಬಹುದು. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಾಮಾನ್ಯ ಮಳೆ ಇರಬಹುದು), ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 6ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಅರಬ್ಬಿ ಸಮುದ್ರದಲ್ಲಿ  ಉಡುಪಿ, ದಕ್ಷಿಣ ಕನ್ನಡ ಕರಾವಳಿ ಸಮೀಪ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೇಲ್ಮೈಸುಳಿಗಾಳಿ ಸೃಷ್ಟಿಯಾಗಿರುವುದರಿಂದ ಈಗಿನ ಮಳೆ ಆರಂಭವಾಗಿದೆ. ಇದು ಶಿಥಿಲಗೊಳ್ಳುತ್ತಿದ್ದಂತೆಯೇ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಇವತ್ತು ಮಧ್ಯಾಹ್ನ ನಂತರ ಶಿಥಿಲಗೊಳ್ಳುವ ಲಕ್ಷಣಗಳಿವೆ. 


No comments:

Post a Comment

06.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

06.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ...