ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 2 ದಿವಸಗಳ ಕಾಲ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದರೂ ಒಕ್ಟೊಬರ್ 9ರಿಂದ ಹೆಚ್ಚಾಗುವ ನಿರೀಕ್ಷೆ ಇದೆ.
ಮಲೆನಾಡು : ಕೊಡಗು, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆ ಇರಬಹುದು. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ದಕ್ಷಿಣ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 2 ದಿವಸಗಳ ಕಾಲ ಮಳೆಯ ಪ್ರಮಾಣ ಕಡಿಮೆ ಇರಬಹುದು. ನಂತರ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಕಡಿಮೆಯಾಗುವ ಸೂಚನೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಒಕ್ಟೊಬರ್ 7ರಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಉತ್ತರ ಭಾರತದ ಕಡೆಯಿಂದ ಶುಶ್ಕ ಗಾಳಿ ಬೀಸುತ್ತಿರುವುದರಿಂದ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.
No comments:
Post a Comment