ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ, ದಕ್ಷಿಣ ಕನ್ನಡದ ಮಂಗಳೂರು, ಸುರತ್ಕಲ್, ಪುತ್ತೂರು ಹಾಗೂ ಉಡುಪಿ ಕರಾವಳಿ ತೀರ ಭಾಗಗಳಲ್ಲಿ ತಡ ರಾತ್ರಿ ಅಥವಾ ಮುಂಜಾನೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ ಸುತ್ತಮುತ್ತ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ದಿನ ಕಳೆದಂತೆ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶಿೃಂಗೇರಿ, ಬಾಳೆಹೊನ್ನೂರು, ಕೊಪ್ಪ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 11ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮದಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಹಾಸನ ಹಾಗೂ ಮೈಸೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಂಗಳೂರಿನ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 11ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ರಾಜ್ಯದಲ್ಲಿ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಒಕ್ಟೊಬರ್ 11ರ ಸುಮಾರಿಗೆ ಹಿಂಗಾರು ಆರಂಭವಾಗಲು ಪೂರಕವಾದ ವಾತಾವರಣ ನಿರ್ಮಾಣವಾಗುವ ಸಾಧ್ಯತೆಗಳಿವೆ. ಅಂಡಮಾನ್ ಬಳಿ ವಾಯುಭಾರ ಕುಸಿತದ ಲಕ್ಷಣಗಳಿವೆ.
No comments:
Post a Comment