Advertise

08 October 2026

09.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಒಕ್ಟೊಬರ್ 11ರಿಂದ ಮಳೆ ಕಡಿಮೆಯಾಗಲಿದ್ದರೂ, ಒಕ್ಟೊಬರ್ 15,16ರಿಂದ ಹಿಂಗಾರು ಆರಂಭವಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ, ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಬಾಳೆಹೊನ್ನೂರು, ಕಳಸ ಸುತ್ತಮುತ್ತ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಅಥವಾ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 11ರಿಂದ ಮಳೆ ಕಡಿಮೆಯಾಗಲಿದ್ದರೂ, ಒಕ್ಟೊಬರ್ 14, 15ರಿಂದ ಹಿಂಗಾರು ಆರಂಭವಾಗುವ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ಉತ್ತರ ಕಡೆಯಿಂದ ಶುಶ್ಕ ಗಾಳ ಬೀಸುತ್ತಿರುವ ಕಾರಣದಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ. 
ಈಗಿನ ಪರಿಸ್ಥಿತಿ ಬದಲಾಗಿ, ಒಕ್ಟೊಬರ್ 15ರಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲೂ ಹಿಂಗಾರು ಮಳೆ ಆರಂಭವಾಗುವ ಸೂಚನೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇವತ್ತು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದರೂ ಗಾಳಿಯ ಒತ್ತಡ ಹೆಚ್ಚಿದ್ದರೆ ಸಂಜೆ ಹಾಗೂ ರಾತ್ರಿ ಮೈಸೂರು, ಹಾಸನ, ಚಿತ್ರದುರ್ಗ, ತುಮಕೂರು ಹಾಗೂ ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಅಲ್ಲಲ್ಲಿ ಅನಿರೀಕ್ಷಿತ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 11ರಿಂದ ಮಳೆ ಕ್ಷೀಣಿಸವ ಸಾಧ್ಯತೆಗಳಿದ್ದರೂ, ಒಕ್ಟೊಬರ್ 15ರಿಂದ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ. 

ಈಗಾಗಲೇ ಬಂಗಾಳಕೊಲ್ಲಿಯಲ್ಲಿ ಹಿಂಗಾರು ಮಾರುತಗಳ ಚಲನೆಗೆ ಪೂರಕವಾದ ವಾತಾವರಣ ಸೃಷ್ಟಿಯಾಗಿದ್ದು, ಒಕ್ಟೊಬರ್ 15ರಿಂದ ರಾಜ್ಯಕ್ಕೆ ಹಿಂಗಾರು ಆಗಮನದ ನಿರೀಕ್ಷೆ ಇದೆ. ಇದರೊಂದಿಗೂ ಒಕ್ಟೊಬರ್ 11ರ ಸುಮಾರಿಗೆ ಅಂಡಮಾನ್ ಉತ್ತರ ಕರಾವಳಿಯಲ್ಲಿ ತಿರಿಗುವಿಕೆ ಆರಂಭವಾಗುವ ಲಕ್ಷಣಗಳಿವೆ. 


No comments:

Post a Comment

19.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂ...