ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 11ರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, 15ರಿಂದ ಹಿಂಗಾರು ಆರಂಭವಾಗುವ ಸಾಧ್ಯತೆಗಳಿವೆ. ಆದರೆ ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದ ತಿರುವಿಕೆಯ ಮೇಲೆ ಅವಲಂಬಿಸಿದೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ, ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರು ಜಿಲ್ಲೆಯ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಶಿವಮೊಗ್ಗ ಜಿಲ್ಲೆಯ ಚಿಕ್ಕಮಗಳೂರು ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 11ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, 15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಒಕ್ಟೊಬರ್ 15ರಿಂದ ಹಿಂಗಾರು ಆರಂಭವಾದರೂ ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿನ ತಿರುವಿಕೆಯ ಮೇಲೆ ಅವಲಂಬಿಸಿದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 11ರಿಂದ ಮಳೆ ಕ್ಷೀಣಿಸವ ಸಾಧ್ಯತೆಗಳಿವೆ. 15ರಿಂದ ಹಿಂಗಾರು ಆರಂಭವಾಗುವ ಸಾಧ್ಯತೆಗಳಿವೆ.
ಒಕ್ಟೊಬರ್ 14ರ ಸುಮಾರಿಗೆ ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಹಾಗೂ ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಏಕ ಕಾಲದಲ್ಲಿ ತಿರುವಿಕೆ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮ ಕಾದು ನೋಡಬೇಕಾಗಿದೆ.
No comments:
Post a Comment