ಇವತ್ತು ರಾಜ್ಯದಾದ್ಯಂತ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.
ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮಂಗಳೂರು ಹಾಗೂ ಉಡುಪಿಯ ಕರಾವಳಿ ತೀರದ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಭಾಗಗಳಲ್ಲಿ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆಗಳಿವೆ.
ಕೊಡಗು ಹಾಗೂ ಕೇರಳ ಗಡಿಭಾಗಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಕೊಡಗಿನ ಭಾಗಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಒಕ್ಟೊಬರ್ 13, 14ರಂದು ಬಂಗಾಳಕೊಲ್ಲಿಯ ತಿರುಗುವಿಕೆಯ ಕಾರಣದಿಂದ ಒಕ್ಟೊಬರ್ 16ರಿಂದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮಳೆ ಆರಂಭವಾಗುವ ಸಾಧ್ಯತೆಗಳಿವೆ. ಇದರೊಂದಿಗೆ ಹಿಂಗಾರು ಆರಂಭವಾಗುವ ಸಾಧ್ಯತೆಗಳಿವೆ.
No comments:
Post a Comment