Advertise

14 October 2026

15.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸೆಖೆಯ ವಾತಾವರಣದ ಇರಲಿದ್ದು, ಮಧ್ಯಾಹ್ನ ನಂತರ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಒಕ್ಟೊಬರ್ 15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿವೆ. ನಾಳೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿದ್ದರೆ, 16ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 15 ರಿಂದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಹಿಂಗಾರು ಮಳೆ ಆರಂಭವಾಗುವ ಮುನ್ಸೂಚನೆ ಇದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇವತ್ತು ಒಣ ಹವೆ ಇದ್ದು, ಒಕ್ಟೊಬರ್ 15ರಿಂದ ಕರ್ನಾಟಕದ ತೆಲಂಗಾಣ ರಾಜ್ಯದ ಗಡಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 16ರಿಂದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಕೋಲಾರ ಜಿಲ್ಲೆಯ ಆಂದ್ರಾ, ತಮಿಳುನಾಡು ಗಡಿಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಒಕ್ಟೊಬರ್ 15ರಿಂದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿವೆ. 

ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಸೋಮಾಲಿಯಾ ನೇರಕ್ಕೆ ವಾಯುಭಾರ ಕುಸಿತದ ತಿರುಗುವಿಕೆಯು ಆರಂಭವಾಗಿದ್ದು, ಇನ್ನೆರಡು ದಿನಗಳಲ್ಲಿ ಈ ತಿರುಗುವಿಕೆ ದಕ್ಷಿಣ ನೇರಕ್ಕೆ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಇನ್ನೊಂದು ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿವೆ. ಈ ಎರಡೂ ತಿರುಗುವಿಕೆಗಳು ಹಿಂಗಾರು ಮಾರುತಗಳ ಚಲನೆಗೆ ಪೂರಕವಾಗಲಿದ್ದು, ರಾಜ್ಯದಲ್ಲಿ ಉತ್ತಮ ಮಳೆಗೆ ಕಾರಣವಾಗಲಿದೆ.
ಬಂಗಾಳಕೊಲ್ಲಿಯಲ್ಲಿ ಸಧ್ಯಕ್ಕೆ ಯಾವುದೇ ವಾಯುಭಾರ ಕುಸಿತ ಅಥವಾ ಚಂಡಮಾರುತ ಉಂಟಾಗುವ ಲಕ್ಷಣಗಳಿಲ್ಲ 

No comments:

Post a Comment

19.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂ...