Advertise

15 October 2026

16.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಮಾತ್ರ ಈ ಜಿಲ್ಲೆಗಳ ಉಳಿದ ಭಾಗಗಳಲ್ಲಿ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 16ರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ( ಉತ್ತರ ಕನ್ನಡ ಸಹಿತ) ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಳ್ಳಾರಿ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಒಕ್ಟೊಬರ್ 16ರಿಂದ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇವತ್ತು ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ. 

ಬಂಗಾಳಕೊಲ್ಲಿಯ ಶ್ರೀಲಂಕಾ ಪೂರ್ವ ಕರಾವಳಿಯಲ್ಲಿ ಹಿಂದೂ ಮಹಾಸಾಗರದ ಕಡೆಯಿಂದ ಬೀಸುತ್ತಿರುವ ಗಾಳಿ ಹಾಗೂ ಬಾಂಗ್ಲಾ ಕಡೆಯಿಂದ ಬೀಸುತ್ತಿರುವ ಹಿಂಗಾರು ಮಾರುತಗಳ ಪ್ರಭಾವದಿಂದ ಅಧಿಕ ಒತ್ತಡದ ಪ್ರದೇಶ ನಿರ್ಮಾಣವಾಗಿದ್ದು, ತಮಿಳುನಾಡು ಮೂಲಕ ಪ್ರವೇಶಿಸುವ ಗಾಳಿಯ ಪರಿಣಾಮದಿಂದ ರಾಜ್ಯದಲ್ಲಿ ಮಳೆಯ ಮುನ್ಸೂಚನೆಗಳಿವೆ. ರಾಜ್ಯದ ಉತ್ತರ ಕರಾವಳಿಯ ಸಮೀಪ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗಿದ್ದು, ಮಳೆಗೆ ಪೂರಕವಾಗಿದೆ. ಅರಬ್ಬಿ ಸಮುದ್ರ ಹಾಗೂ ಹಿಂದೂ ಮಹಾಸಾಗರದಲ್ಲಿ ಒಕ್ಟೊಬರ್ 19ರ ಸುಮಾರಿಗೆ ಎರಡು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಇದರಿಂದ ಹಿಂಗಾರು ಮಾರುತಗಳು ಚುರುಕಾಗಬಹುದು. 

ಹಿಂಗಾರು ಆರಂಭ ತಡವಾಗಲಿದೆ. ಈಗಿನಂತೆ ಹಿಂಗಾರು ಮಾರುತಗಳು ಒಕ್ಟೊಬರ್ 18ರ ಸುಮಾರಿಗೆ ಬಲಗೊಳ್ಳುವ ಲಕ್ಷಣಗಳಿವೆ. 

No comments:

Post a Comment

19.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂ...