Advertise

16 October 2026

17.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


17.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ  ಮುಂದಿನ 10 ದಿನಗಳವರೆಗೂ ಮಳೆಯ ಲಕ್ಷಣಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 25ರ ತನಕವೂ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಹೆಚ್ಚಿನ ಎಲ್ಲಾ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯಾಗುವ ಸೂಚನೆಗಳಿವೆ. 

ಬಂಗಾಳಕೊಲ್ಲಿಯಲ್ಲಿ ಹಿಂದೂಮಹಾಸಾಗರ ಗಾಳಿಯ ಪ್ರಭಾವ ಹೆಚ್ಚಾಗಿದ್ದು, ಒಕ್ಟೊಬರ್ 17ರ ಸುಮಾರಿಗೆ ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಹಾಗೂ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಏಕ ಕಾಲದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಇದರೊಂದಿಗೆ ಬಂಗಾಳಕೊಲ್ಲಿಯ ಈಗಿನ ಹಿಂದೂಮಹಾಸಾಗರ ಗಾಳಿಯ ಪ್ರಭಾವ ಕಡಿಮೆಯಾಗಲಿದ್ದು, ಒಕ್ಟೊಬರ್ 19ರ ನಂತರ ಹಿಂಗಾರು ಮಾರುತಗಳು ಆಗಮನದ ನಿರೀಕ್ಷೆ ಇದೆ.
ಈಗಿನ ಮಳೆಯು ಬಂಗಾಳಕೊಲ್ಲಿಯ ತಮಿಳುನಾಡು, ಆಂದ್ರಾ ಕರಾವಳಿಯ ಹಾಗೂ ಅರಬ್ಬಿ ಸಮುದ್ರದ ಉತ್ತರ ಕನ್ನಡ ಕರಾವಳಿ ಸಮೀಪದ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ಆಗುತ್ತಿದೆ. 

No comments:

Post a Comment

19.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂ...