Advertise

17 October 2026

18.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

 ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಒಕ್ಟೊಬರ್ 25ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 24ರ ತನಕ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 24ರ ತನಕ ಮಳೆ ಮುಂದುವರಿಯುವ ಸೂಚನೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 24ರ ತನಕ ಮಳೆ ಮುಂದುವರಿಯುವಂತೆ ತೋರುತ್ತಿದೆ. 

ತಮಿಳುನಾಡಿನ ತಿರುವಿಕೆ ಹಾಗೂ ಅರಬ್ಬಿ ಸಮುದ್ರದ ಉತ್ತರ ಕೇರಳ ಕರಾವಳಿಯಲ್ಲೂ ತಿರುಗುವಿಕೆ ಮುಂದುವರಿದಿರುವುದರಿಂದ ರಾಜ್ಯದಲ್ಲಿ ಉತ್ತಮ ಮಳೆ ಮುಂದುವರಿಯುವ ಲಕ್ಷಣಗಳಿವೆ. ಒಕ್ಟೊಬರ್ 20 ರ ನಂತರ ಬಂಗಾಳಕೊಲ್ಲಿಯಲ್ಲಿ ಯಾವುದೇ ವಾಯುಭಾರ ಕುಸಿತಗಳು ಉಂಟಾಗದಿದ್ದರೆ ಹಿಂಗಾರು ಆಗಮನದ ನಿರೀಕ್ಷೆ ಇದೆ. 

No comments:

Post a Comment

19.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂ...