30.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ರಾಜ್ಯದಾದ್ಯಂತ ಛಳಿಯ ಪ್ರಮಾಣವು ಕಡಿಮೆಯಾಗದ್ದು, ಅರ್ನಬ್ ಚಂಡಮಾರುತದ ಪರಿಣಾಮ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕರಾವಳಿಯ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಂಜೆ ಮೋಡದ ಪ್ರಮಾಣ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಮಲೆನಾಡಿನ ಕೊಡಗು ಜಿಲ್ಲೆಯ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಪ್ರದೇಶಗಳಲ್ಲಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ.
ಅರ್ನಬ್ ಚಂಡಮಾರುತವು ಉತ್ತರಕ್ಕೆ ಚಲಿಸುತ್ತಿರುವ ಈ ಸಂದರ್ಭದಲ್ಲೆ ದಕ್ಷಿಣ ಥೈಲ್ಯಾಂಡ್ ಪಶ್ಚಿಮ ತೀರದಲ್ಲಿ ತಿರುಗುವಿಕೆ ಆರಂಭವಾಗಿದ್ದು, ನವೆಂಬರ್ 2ರಂದು ಆಂದ್ರಾದ ವಿಶಾಖಪಟ್ಟಣದ ಕರಾವಳಿಗೆ ಚಂಡಮಾರುತವಾಗಿ ಪರಿವರ್ತನೆಗೊಂಡು ತಲಪುವ ನಿರೀಕ್ಷೆಯಿದೆ.
ಇದರ ಪರಿಣಾಮದಿಂದ ಅರಬ್ಬಿ ಸಮುದ್ರ ಹಾಗೂ ಹಿಂದೂಮಹಾಸಾಗರದ ಕಡೆಯಿಂದ ಗಾಳಿ ಸೆಳೆಯಲ್ಪಟ್ಟು, ಆಂದ್ರಾ ಮೂಲಕ ರಾಜ್ಯದ ಕಡೆಗೆ ಬೀಸುವ ಸಾಧ್ಯತೆಗಳಿರುವುದರಿಂದ ಅಕ್ಟೋಬರ್ 31ರಿಂದ ರಾಜ್ಯದ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ.
No comments:
Post a Comment