Advertise

01 November 2026

02.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಇವತ್ತಿನಿಂದ ಆರಂಭವಾಗಿ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಹಾಗೂ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ಗಾಳಿಯ ಒತ್ತಡ ಹೆಚ್ಚಿದ್ದರೆ ಉಳಿದ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 3 ಅಥವಾ 4 ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 2ರಿಂದ ಉತ್ತಮ ಮಳೆಯಾಗುವ ನಿರೀಕ್ಷೆಗಳಿವೆ. 

ಬಂಗಾಳಕೊಲ್ಲಿಯ ತಿರುಗುವಿಕೆಯು ನಾಳೆ ವಾಯುಭಾರ ಕುಸಿತವಾಗಿ ಮಾರ್ಪಾಡಾಗುವ ಲಕ್ಷಣಗಳಿದ್ದು, ನವೆಂಬರ್ 3ರಂದು ಆಂದ್ರಾದ ನೆಲ್ಲೂರು ಕರಾವಳಿಯಲ್ಲಿ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ನೇರವಾಗಿ ಮಧ್ಯ ಕರ್ನಾಟಕದ ಮೂಲಕ ಚಲಿಸಿ ಗೋವಾ, ದಕ್ಷಿಣ ಮಹಾರಾಷ್ಟ್ರ ಕಡೆ ಸಾಗಿ ಶಿಥಿಲಗೊಳ್ಳುವ ಸಾಧ್ಯತೆಗಳಿವೆ.
ಇದರ ಪರಿಣಾಮದಿಂದ ರಾಜ್ಯದಲ್ಲಿ  ಉತ್ತಮ ಮಳೆಯ ನಿರೀಕ್ಷೆಗಳಿವೆ.
ಮುಂದಿನ ವಾರದಲ್ಲಿ ಹಿಂಗಾರು ಮಾರುತ ಚುರುಕಾಗುವ ಲಕ್ಷಣಗಳಿವೆ. 

02.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...