Advertise

02 November 2026

03.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

03.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 8ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 8ರ ತನಕ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ನವೆಂಬರ್ 3ರಂದು ಮುರಸು ಚಂಡಮಾರುತದ ಪ್ರಭಾವದಿಂದ ಗಾಳಿಯೊಂದಿಗೆ ಉತ್ತಮ ಮಳೆಯಾಗಬಹುದು. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ), ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ನವೆಂಬರ್ 3ರಂದು ಮುರಸು ಚಂಡಮಾರುತದ ಪ್ರಭಾವದಿಂದ ಗಾಳಿಯ ಸಹಿತ ಮಳೆಯ ಸಾಧ್ಯತೆಗಳಿವೆ. ಉಳಿದ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯ ಸಾಧ್ಯತೆಗಳಿವೆ. 

ಮುರಸು ಚಂಡಮಾರುತವು ಇಂದು ತಡ ರಾತ್ರಿ ಆಂದ್ರಾ ನೆಲ್ಲೂರು ಕರಾವಳಿಯಲ್ಲಿ ಭೂ ಪ್ರವೇಶಿಸಿ ದುರ್ಬಲಗೊಂಡರೂ ಗಾಳಿಯ ಅಧಿಕ ಒತ್ತಡದ ಪರಿಣಾಮದಿಂದ ರಾಜ್ಯದಲ್ಲಿ ಮುಂದಿನ 2 ದಿವಸಗಳ ಕಾಲ ಉತ್ತಮ ಮಳೆಯಾಗುವ ನಿರೀಕ್ಷೆಗಳಿವೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 8ರ ತನಕ ಮಳೆ ಮುಂದುವರಿಯುವ ಸೂಚನೆಗಳಿವೆ. 

No comments:

Post a Comment

16.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

16.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂ...