ಮುರುಸು ಚಂಡಮಾರುತವು ದುರ್ಬಲಗೊಳ್ಳುತ್ತಿದ್ದು, ನವೆಂಬರ್ 4ರಂದು ಸಂಪೂರ್ಣ ಶಿಥಿಲಗೊಳ್ಳಲಿದೆ. ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದರೂ ಆಂದ್ರಾ ಗಡಿ ದಾಟಿ ರಾಜ್ಯಕ್ಕೆ ಪ್ರವೇಶಿಸುವ ಸಾಧ್ಯತೆಗಳು ಕ್ಷೀಣಿಸುತ್ತಿವೆ.
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 6ರ ತನಕ ಹೆಚ್ಚು ಹಾಗೂ ಮುಂದಿನ 2 ದಿವಸಗಳ ಕಾಲ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿದೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 6ರ ತನಕ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹೆಚ್ಚು ಮಳೆಯ ಸಾಧ್ಯತೆಗಳಿವೆ. ನಂತರ 2 ದಿವಸಗಳ ಕಾಲ ಅಲ್ಲಲ್ಲಿ ಸಾಮಾನ್ಯ ಮಳೆಯ ಲಕ್ಷಣಗಳಿವೆ.
ಉತ್ತರ ಒಳನಾಡು : ಮುರಸು ಚಂಡಮಾರುತ ಆರಂಭದಲ್ಲೇ ದುರ್ಬಲಗೊಂಡಿದ್ದರಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ. ( ಈ ಮೊದಲೇ ತಿಳಿಸಿದಂತೆ "ಮುರುಸು" ದುರ್ಬಲ ಚಂಡಮಾರುತ ).
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಿಗೆ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮದಿಂದ ಮಳೆಯ ಸಾಧ್ಯತೆಗಳು ದೂರವಾಗುತ್ತಿದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 6ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮುರಸು ಚಂಡಮಾರುತವು ಶಿಥಿಲಗೊಳ್ಳುತ್ತಿದ್ದಂತೆಯೇ ಬಂಗಾಳಕೊಲ್ಲಿಯ ಕಡೆಯಿಂದ ಹಿಂಗಾರು ಮಾರುತಗಳ ಜೊತೆಗೆ ಫೆಸಿಫಿಕ್ ಸಾಗರದ ಕಡೆಯಿಂದ
ಥೈಲ್ಯಾಂಡ್, ಮಲೇಶಿಯಾ ದಾಟಿ ಬೀಸುತ್ತಿರುವ ಗಾಳಿಯೂ ಸೇರಿಕೊಂಡು ನವೆಂಬರ್ 8ರ ತನಕ ರಾಜ್ಯದಲ್ಲಿ ಮಳೆಯಾಗಲಿದ್ದು, ನಂತರ ಉತ್ತರ ಭಾರತದ ಕಡೆಯಿಂದ ಬೀಸುವ ಶುಷ್ಕ ಗಾಳಿಯ ಪ್ರಭಾವ ಹೆಚ್ಚಾಗುವ ಲಕ್ಷಣಗಳಿವೆ.
ಹಿಂಗಾರು ಮಾರುತಗಳು ತಮಿಳುನಾಡು ಹಾಗೂ ಕೇರಳ ರಾಜ್ಯಗಳಿಗೆ ಸೀಮಿತಗೊಳ್ಳುಬಹುದು.
No comments:
Post a Comment