ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಸಣ್ಣ ಅವಧಿಯ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಳ್ತಂಗಡಿ ತಾಲ್ಲೂಕಿನಲ್ಲಿ ಸ್ವಲ್ಪ ಹೆಚ್ಚಿರಬಹುದು. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಜೊತೆಗೆ ಒಂದೆರಡು ಕಡೆ (ಉಡುಪಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ) ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 6ರ ತನಕ ಮಳೆಯ ಸಾಧ್ಯತೆಗಳಿದ್ದರೂ ನಂತರ ಪ್ರಮಾಣ ಹಾಗೂ ವ್ಯಾಪ್ತಿ ಕಡಿಮೆಯಾಗುವ ಲಕ್ಷಣಗಳಿವೆ. ಒಟ್ಟಿನಲ್ಲಿ ನವೆಂಬರ್ 8ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಅಲ್ಲಲ್ಲಿ, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಚಿಕ್ಕಮಗಳೂರು ಉಳಿದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 6ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಪ್ರಮಾಣ ಕಡಿಮೆಯಾಗಿ ನವೆಂಬರ್ 8ರ ತನಕ ಮಳೆ ಇರಬಹುದು.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಉತ್ತಮ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮದಿಂದ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 6ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ನವೆಂಬರ್ 8ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಉತ್ತರ ಭಾರತದ ರಾಜಸ್ಥಾನದಲ್ಲಿ ಅಧಿಕ ಒತ್ತಡದ ತಿರುವಿಕೆ ಉಂಟಾಗಿದ್ದರ ಪರಿಣಾಮದಿಂದ ಹಿಂಗಾರು ಮಾರುತಗಳಿಗೆ ಹಿನ್ನಡೆ ಉಂಟಾಗಿದೆ. ಬಂಗಾಳಕೊಲ್ಲಿಯ ಕಡೆಯಿಂದ ತೇವಾಂಶಭರಿತ ಗಾಳಿಯು ರಾಜ್ಯದ ದಕ್ಷಿಣ ಭಾಗಗಳಿಗೆ ಮಾತ್ರ ಸೀಮಿತವಾಗಿದ್ದು, ಕ್ರಮೇಣ ನವೆಂಬರ್ 8ರ ನಂತರ ತಮಿಳುನಾಡು ಹಾಗೂ ಕೇರಳ ರಾಜ್ಯಗಳಿಗೆ ಮಾತ್ರ ಈ ಗಾಳಿಯ ಬೀಸುವಿಕೆ ಇರಬಹುದು.
ಇದರೊಂದಿಗೆ ನವೆಂಬರ್ 8ರ ನಂತರ ರಾಜ್ಯದಲ್ಲಿ ಛಳಿಯ ಪ್ರಮಾಣವು ನಿಧಾನವಾಗಿ ಹೆಚ್ಚಾಗುವ ಸಾಧ್ಯತೆಗಳಿವೆ.
ಸಧ್ಯದಲ್ಲಿ ಬಂಗಾಳಕೊಲ್ಲಿಯಲ್ಲಿ ಯಾವುದೇ ವಾಯುಭಾರ ಕುಸಿತಗಳ ಲಕ್ಷಣಗಳು ಗೋಚರಿಸುತ್ತಿಲ್ಲ.
No comments:
Post a Comment