ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ದಕ್ಷಿಣ ಭಾಗಗಳಲ್ಲಿ ( ಉಡುಪಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳ ಸುತ್ತಮುತ್ತ) ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 8ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳಿವೆ.
ಮಲೆನಾಡು : ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ, ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 8ರ ತನಕ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಉತ್ತರ ಒಳನಾಡು : ಉತ್ತರ ಭಾರತದ ಕಡೆಯಿಂದ ಶುಷ್ಕ ಗಾಳಿ ಬೀಸುತ್ತಿರುವ ಕಾರಣದಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಗಾಳಿಯ ಒತ್ತಡ ಹೆಚ್ಚಿದ್ದರೆ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 8ರ ತನಕ ಮಳೆ ಮುಂದುವರಿಯಲಿದೆ.
ನವೆಂಬರ್ 10ರಿಂದ ಉತ್ತರ ಫೆಸಿಫಿಕ್ ಮಹಾಸಾಗರದ ಕಡೆಗೆ ಪ್ರಭಲವಾದ ಗಾಳಿಯ ಸಂಚಾರವು ಬಂಗಾಳಕೊಲ್ಲಿಯ ಕಡೆಗೆ ಬೀಸುವ ಸಾಧ್ಯತೆಗಳಿದ್ದು, ಇದರಿಂದ ಆಗ್ನೇಯ ಅರಬ್ಬಿ ಸಮುದ್ರದ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಸ್ಥಿತಿ ಕಾದು ನೋಡಬೇಕಾಗಿದೆ.
ಬಂಗಾಳಕೊಲ್ಲಿಯ ಗಾಳಿಯ ಪ್ರಭಾವ ಹೆಚ್ಚಾದರೆ ರಾಜ್ಯದಲ್ಲಿ ಮತ್ತೆ ಮಳೆಯ ವಾತಾವರಣ ಉಂಟಾಗಬಹುದು.
No comments:
Post a Comment