Advertise

07 November 2026

08.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಬಿಸಿಲು ಹಾಗೂ ರಾತ್ರಿ ಛಳಿಯ ವಾತಾವರಣ ಆರಂಭವಾಗುವ ಲಕ್ಷಣಗಳಿವೆ. ಆದರೆ ನವೆಂಬರ್ 14ರಿಂದ ಅರಬ್ಬಿ ಸಮುದ್ರದ ವಾಯುಭಾರ ಕುಸಿತದ ಪರಿಣಾಮದಿಂದ ಮತ್ತೆ ಮಳೆ ಆರಂಭವಾಗುವ ಸೂಚನೆಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಉಳಿದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಒಣ ಹವೆ ಹಾಗೂ ರಾತ್ರಿ ಛಳಿಯ ವಾತಾವರಣ ಆರಂಭವಾಗುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮದಿಂದ ಒಣ ಹವೆ ಮುಂದುವರಿಯಲಿದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಮತ್ತು ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ನವೆಂಬರ್ 11ರ ಸುಮಾರಿಗೆ ಅರಬ್ಬಿ ಸಮುದ್ರದಲ್ಲಿ ಹಾಗೂ ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿದ್ದು, ಅರಬ್ಬಿ ಸಮುದ್ರದ ತಿರುವಿಕೆಯು ಮುಂದೆ ವಾಯುಭಾರ ಕುಸಿತವಾಗುವ ಲಕ್ಷಣಗಳಿವೆ. ಇದರಿಂದ ರಾಜ್ಯದಲ್ಲಿ ಮಳೆಯ ನಿರೀಕ್ಷೆ ಇದೆ. ಚಲಿಸುವ ಪಥವನ್ನು ಕಾದು ನೋಡಬೇಕಾಗಿದೆ. 

No comments:

Post a Comment

16.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

16.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂ...