09.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ನಿನ್ನೆ ಸಂಜೆ ಹಾಗೂ ಇಂದು ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಅಲ್ಲಲ್ಲಿ ತುಂತುರು ಮಳೆಯಾಗಿದೆ.
ಇವತ್ತು, ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಸೆಖೆಯ ವಾತಾವರಣದೊಂದಿಗೆ ಸಂಜೆ, ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಮಳೆಯ ಸಾಧ್ಯತೆಗಳು ಕಡಿಮೆಯಾಗುವ ಸೂಚನೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು : ಉತ್ತರ ಭಾರತದ ಶುಷ್ಕ ಗಾಳಿಯ ಪರಿಣಾಮದಿಂದ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.
ದಕ್ಷಿಣ ಒಳನಾಡು : ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ನವೆಂಬರ್ 11ರ ಸುಮಾರಿಗೆ ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಹಾಗೂ ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ಏಕಕಾಲದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ. ಪರಿಸ್ಥಿತಿ ಕಾದು ನೋಡಬೇಕಾಗಿದೆ. ಈ ವಾಯುಭಾರ ಕುಸಿತಗಳ ಹಾಗೂ ಇದರೊಂದಿಗೆ ರಾಜಸ್ಥಾನದ ಅಧಿಕ ಒತ್ತಡದ ತಿರುವಿಕೆ ಕಾರಣಗಳಿಂದ ನವೆಂಬರ್ 9, 10ರಿಂದ ರಾಜ್ಯದಾದ್ಯಂತ ಉತ್ತರ ಭಾರತದ ಕಡೆಯಿಂದ ಶುಷ್ಕ ಗಾಳಿ ಬೀಸುವುದು ಸಾಧ್ಯತೆಗಳಿವೆ.
No comments:
Post a Comment