Advertise

12 November 2026

13.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಮುಂದಿನ 10 ದಿನಗಳವರೆಗೂ ಒಣ ಹವೆ ಮುಂದುವರಿಯಲಿದೆ. 
ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ, ಮಲೆನಾಡಿನ ಕೊಡಗು, ಚಿಕ್ಕಮಗಳೂರು, ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿ ಸ್ವಚ್ಛ ವಾತಾವರಣ ಹೊಂದಬಹುದು. 
ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಛಳಿಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ನಿರೀಕ್ಷೆ ಇದೆ. 
ನವೆಂಬರ್ 15 ಹಾಗೂ 16ರಂದು ಮಲೆನಾಡಿನ ಕೊಡಗು, ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ನಿರೀಕ್ಷೆ ಇದೆ. 

ಅಕ್ವಾನ್ ಚಂಡಮಾರುತವು ನಿರೀಕ್ಷೆಗಿಂತ ಕಡಿಮೆ ಪ್ರಮಾಣದಲ್ಲಿ ಇರುವ ಸಾಧ್ಯತೆಗಳಿದ್ದು, ನವೆಂಬರ್ 13ರಂದು ದಕ್ಷಿಣ ಮಧ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ನವೆಂಬರ್ 15ರ ಸುಮಾರಿಗೆ ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಲಕ್ಷಣಗಳಿವೆ. 
ಈ ಚಂಡಮಾರುತವು ದಕ್ಷಿಣ ಭಾರತದ ಕರಾವಳಿ ಸಮೀಪ ಬರುವ ಸಾಧ್ಯತೆಗಳು ಕಡಿಮೆಯಾಗಿದ್ದು, ಉತ್ತರ ಅಥವಾ ಉತ್ತರ-ಪೂರ್ವಾಭಿಮುಖವಾಗಿ ಚಲಿಸುವ ಸಾಧ್ಯತೆಗಳಿವೆ. 
ನವೆಂಬರ್ 19, 20ರ ಸುಮಾರಿಗೆ ಬಾಂಗ್ಲಾದೇಶ ಅಥವಾ ಮ್ಯಾನ್ಮಾರ್ ಕರಾವಳಿಗೆ ತಲಪುವ ನಿರೀಕ್ಷೆಯಿದೆ. 

No comments:

Post a Comment

16.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

16.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂ...