Advertise

16 November 2026

17.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.11.2026ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಬಂಗಾಳಕೊಲ್ಲಿಯ ಪ್ರಭಲ ವಾಯುಭಾರ ಕುಸಿತದ ಪರಿಣಾಮದಿಂದ ಛಳಿ ಸ್ವಲ್ಪ ಮಟ್ಟಿಗೆ ಕಡಿಮೆ ಇರಬಹುದು.

ಇನ್ನೆರಡು ದಿನಗಳಲ್ಲಿ ಅಕ್ವಾನ್ ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿರುವ ಈ ಪ್ರಭಲ ವಾಯುಭಾರ ಕುಸಿತವು ನವೆಂಬರ್ 19ರ ಸುಮಾರಿಗೆ ಆಂದ್ರಾ ಕರಾವಳಿಯ ವಿಶಾಖಪಟ್ಟಣ ಹಾಗೂ ಕಾಕಿನಾಡ ನಡುವೆ ಭೂ ಪ್ರವೇಶಿಸುವ ಸಾಧ್ಯತೆಗಳಿವೆ. ಅಲ್ಲಿಂದ ಉತ್ತರಾಭಿಮುಖವಾಗಿ ಚಲಿಸುವ ಸಾಧ್ಯತೆಗಳಿರುವುದರಿಂದ ರಾಜ್ಯದಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.

ಈ ಅಕ್ವಾನ್ ಚಂಡಮಾರುತವು ಶಿಥಿಲಗೊಳ್ಳುತ್ತಿದ್ದಂತೆಯೇ ನವೆಂಬರ್ 22ರ ನಂತರ ಉತ್ತರ ಭಾರತದ ಕಡೆಯಿಂದ ಬೀಸುವ ಗಾಳಿಯ ಪ್ರಭಾವ ಕಡಿಮೆಯಾಗಿ ಬಂಗಾಳಕೊಲ್ಲಿಯ ಗಾಳಿಯ ಪ್ರಭಾವ ಹೆಚ್ಚಾಗುವ ಲಕ್ಷಣಗಳಿರುವುದರಿಂದ ದಕ್ಷಿಣ ಒಳನಾಡು, ಕರಾವಳಿ(ಉತ್ತರ ಕನ್ನಡ ಹೊರತು), ಮಲೆನಾಡು ಜಿಲ್ಲೆಗಳಲ್ಲಿ  ಛಳಿಯ ಪ್ರಮಾಣವು ಕಡಿಮೆಯಾಗುವ ಸಾಧ್ಯತೆಗಳಿವೆ.

No comments:

Post a Comment

29.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...