Advertise

19 November 2026

20.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 

ಅಕ್ವಾನ್ ಚಂಡಮಾರುತವು ನಾಳೆ ದುರ್ಬಲಗೊಂಡು ಒರಿಸ್ಸಾದ ಪುರಿ ಹಾಗೂ ಬ್ರಹ್ಮಪುರ ಕರಾವಳಿಯಲ್ಲಿ ಪ್ರವೇಶಿಸಲಿದೆ.
22ರ ಮುಂಜಾನೆ ಛತ್ತೀಸಗಡದಲ್ಲಿ ಸಂಪೂರ್ಣ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. 
ಇದರೊಂದಿಗೆ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ತಡೆಯಲ್ಪಟ್ಟು, ಬಂಗಾಳಕೊಲ್ಲಿಯಿಂದ ದಕ್ಷಿಣ ಭಾರತ ಕಡೆಗೆ ಗಾಳಿ ಬೀಸಲು ಆರಂಭವಾಗಲಿದೆ. ಛಳಿಯ ಪ್ರಮಾಣವು ಕಡಿಮೆಯಾಗಿ, ನವೆಂಬರ್ 24ರಿಂದ ಒಂದೆರಡು ದಿನಗಳ ಕಾಲ ದಕ್ಷಿಣ ಒಳನಾಡು, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. 
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. 

ಮುಂದಿನ ದಿನಗಳಲ್ಲಿ ಛಳಿ ಆಗಮಕ್ಕೆ ಸಮಯ ಬೇಕಾಗಬಹುದು. 


No comments:

Post a Comment

29.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...