Advertise

21 November 2026

22.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 

ಅಕ್ವಾನ್ ಚಂಡಮಾರುತವು ಶಿಥಿಲಗೊಳ್ಳುವ ಅಂತಿಮ ಹಂತದಲ್ಲಿದೆ. 
ನವೆಂಬರ್ 23 ರಿಂದ ಬಂಗಾಳಕೊಲ್ಲಿಯಿಂದ ಹಿಂಗಾರು ಮಾರುತಗಳು ಚುರುಕಾಗಲಿದ್ದು, ರಾಜ್ಯದಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. 

ನವೆಂಬರ್ 23 ರಿಂದ 27ರ ತನಕ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆಗಳಿದ್ದರೆ, ಉತ್ತರ ಒಳನಾಡಿನ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ. 

ನವೆಂಬರ್ 27ರಂದು ಉತ್ತರ ಸುಮಾತ್ರ ಕರಾವಳಿಯಿಂದ ಶ್ರೀಲಂಕಾ ದಕ್ಷಿಣ ಕರಾವಳಿಯ ಕಡೆಗೆ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. 
ಈಗಿನಂತೆ ಇದೇ ಉತ್ತರ ಸುಮಾತ್ರ ಭಾಗದಲ್ಲಿ ಡಿಸೆಂಬರ್ ತಿಂಗಳಲ್ಲೂ ವಾಯುಭಾರ ಕುಸಿತಗಳ ಸರಣಿ ಆರಂಭವಾಗುವ ಸಾಧ್ಯತೆಗಳಿವೆ. 



No comments:

Post a Comment

29.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...