23.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಇವತ್ತು ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಹಿಂಗಾರು ಮಾರುತಗಳು ಚುರುಕಾಗಿರುವುದರಿಂದ ರಾಜ್ಯದಲ್ಲಿ ನವೆಂಬರ್ 23 ರಿಂದ ಮಳೆಯ ವಾತಾವರಣ ಉಂಟಾಗುವ ಲಕ್ಷಣಗಳಿವೆ.
ಈಗಿನಂತೆ ನವೆಂಬರ್ 23ರಂದು ರಾಜ್ಯದ ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ. ಮಂಡ್ಯ, ಚಾಮರಾಜನಗರ, ಮೈಸೂರು.
ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಮಲೆನಾಡಿನ ಕೊಡಗು ಜಿಲ್ಲೆಯ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 24ರಿಂದ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳ ಮೂಲಕ ಮಳೆ ಆರಂಭವಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು ಜಿಲ್ಲೆಯ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ.
No comments:
Post a Comment