ಕರಾವಳಿ : ಕಾಸರಗೋಡು ಸಹಿತ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಸಂಜೆ, ರಾತ್ರಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಹಗುರ ಮೋಡದ ವಾತಾವರಣದ ಸಾಧ್ಯತೆಗಳಿವೆ.
ಈಗಿನಂತೆ ನವೆಂಬರ್ 25ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.
ಮಲೆನಾಡು : ರಾಜ್ಯದ ಮಲೆನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಸಂಜೆ ಹಾಗೂ ರಾತ್ರಿಯ ವೇಳೆ ಕೊಡಗು, ಹಾಸನದ ಸಕ್ಲೇಶ್ಪುರ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಣ್ಣ ಪ್ರಮಾಣದ ಹಗುರ ಮೋಡದ ವಾತಾವರಣದ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 24ರಿಂದ ಮಳೆ ಆರಂಭವಾಗುವ ಸೂಚನೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿದರೂ ಸಂಜೆ, ರಾತ್ರಿ ಬಳ್ಳಾರಿ, ರಾಯಚೂರು, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಸಾಧ್ಯತೆಗಳಿವೆ.
ಈಗಿನಂತೆ ನವೆಂಬರ್ 24ರಿಂದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಸಾಧ್ಯತೆಗಳಿದ್ದು, ಮಳೆಯ ನಿರೀಕ್ಷೆ ಇಲ್ಲ.
ಆದರೂ ಗಾಳಿಯ ಒತ್ತಡ ಹೆಚ್ಚಿದ್ದರೆ ಬಳ್ಳಾರಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 25ರಿಂದ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.
No comments:
Post a Comment