ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಸಂಜೆ, ರಾತ್ರಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಜಿಲ್ಲೆಯ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಮಾತ್ರ ಇರಬಹುದು.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 28ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 28ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 28ರ ತನಕ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. ಈಗ ಮಳೆಯ ಸಾಧ್ಯತೆಗಳು ಗೋಚರಿಸುತ್ತಿಲ್ಲ. ಆದರೂ ಪರಿಸ್ಥಿತಿ ಬದಲಾಗಬಹುದು. ಆಯಾ ದಿವಸಗಳ ಮುನ್ಸೂಚನೆ ನೋಡಬೇಕಾಗಿದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬೆಳಿಗ್ಗೆಯಿಂದಲೇ ಮೋಡದ ವಾತಾವರಣ ಇರಲಿದ್ದು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂಜಾನೆಯೇ ತುಂತುರು ಮಳೆ ಪ್ರಾರಂಭವಾಗಿದೆ. ಮಧ್ಯಾಹ್ನ ನಂತರ ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಹಾಗೂ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಅನಿರೀಕ್ಷಿತ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 27ರ ತನಕ ಮಳೆ ಮುಂದುವರಿಯುವ ಸೂಚನೆಗಳಿವೆ.
ನವೆಂಬರ್ 29ರಿಂದ ಅರಬ್ಬಿ ಸಮುದ್ರದ ಗಾಳಿಯ ದಿಕ್ಕು ಬದಲಾಗುವುದರಿಂದ ಅಂದರೆ ಉತ್ತರ ಭಾರತದ ಕಡೆಯಿಂದ ಶುಶ್ಕ ಗಾಳಿಯು ದಕ್ಷಿಣಕ್ಕೆ ಹಾಗೂ ಬಂಗಾಳಕೊಲ್ಲಿಯಲ್ಲೂ ಗಾಳಿಯ ಚಲನೆ ದಕ್ಷಿಣಾಭಿಮುಖವಾಗಿ ಇರುವುದರಿಂದ ರಾಜ್ಯದಲ್ಲಿ ಮಳೆಯ ವಾತಾವರಣ ಕಡಿಮೆಯಾಗಿ ಒಣ ಹವೆ ಮುಂದುವರಿಸುವ ಸಾಧ್ಯತೆಗಳಿವೆ.
No comments:
Post a Comment