ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 28ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 27ರ ತನಕ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಬೆಳಗಾವಿ, ಗದಗ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆ ಅನಿರೀಕ್ಷಿತವಾಗಿ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗಿದ್ದು, ನವೆಂಬರ್ 27ರ ನಂತರ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 27ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.
ನವೆಂಬರ್ 29ರಂದು ಮ್ಯಾನ್ಮಾರ್ ದಕ್ಷಿಣ ತುದಿಯ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆಯು ಉಂಟಾಗಲಿದ್ದು, ಈಗಿನ ಮುನ್ಸೂಚನೆಯಂತೆ ಈ ತಿರುಗುವಿಕೆಯು ಮುಂದೆ ವಾಯುಭಾರ ಕುಸಿತ, ಚಂಡಮಾರುತವಾಗುವ ಸಾಧ್ಯತೆಗಳು ಗೋಚರಿಸುತ್ತಿವೆ.
No comments:
Post a Comment