Advertise

26 November 2026

27.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


27.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕರಾವಳಿ ತೀರ ಭಾಗಗಳ ಸುತ್ತಮುತ್ತ ಮಳೆ ಸ್ವಲ್ಪ ಹೆಚ್ಚಿರಬಹುದು. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 28ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನವೆಂಬರ್ 27ರಿಂದ ಕಡಿಮೆಯಾಗುವ ಸೂಚನೆಗಳಿವೆ.

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ನವೆಂಬರ್ 28ರ ತನಕ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಉತ್ತರ ಒಳನಾಡು : ನಿನ್ನೆ ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ಅನಿರೀಕ್ಷಿತ ಅಲ್ಲಲ್ಲಿ ಮಳೆಯಾಗಿತ್ತು.
ಇವತ್ತು ಸಹ ಇದೇ ಜಿಲ್ಲೆಗಳಲ್ಲಿ  ಹಾಗೂ ಧಾರವಾಡ, ಬಳ್ಳಾರಿ ಜಿಲ್ಲೆಗಳಲ್ಲೂ ಆ ಸಾಧ್ಯತೆಗಳಿವೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮಳೆಯ ಸಾಧ್ಯತೆಗಳು ಕಡಿಮೆಯಾಗಿದ್ದು, ದಿನಕಳೆದಂತೆ ಬಿಸಿಲಿನ ವಾತಾವರಣ ಹೆಚ್ಚಾಗುವ ನಿರೀಕ್ಷೆ ಇದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ), ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 28ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. 

ನವೆಂಬರ್ 29ರ ಸುಮಾರಿಗೆ ಅಂಡಮಾನ್ ದಕ್ಷಿಣ ಕರಾವಳಿ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿದ್ದು, 30ರ ನಂತರ ವಾಯುಭಾರ ಕುಸಿತ, ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಂಭವ ಇದೆ. ಡಿಸೆಂಬರ್ 6, 7ರಂದು ತಮಿಳುನಾಡು ಅಥವಾ ಆಂದ್ರಾ ಕರಾವಳಿಗೆ ತಲಪುವ ನಿರೀಕ್ಷೆಯಿದೆ. 
ಇದರಿಂದ ರಾಜ್ಯದಲ್ಲಿ ಮತ್ತೆ ಮಳೆಯ ಸಾಧ್ಯತೆಗಳನ್ನು ಕಾದು ನೋಡಬೇಕಾಗಿದೆ. 



No comments:

Post a Comment

29.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...