ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 28ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 28ರಿಂದ ಮಳೆಯ ಪ್ರಮಾಣ ಕಡಿಮೆಯಾಗಬಹುದು.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೀದರ್, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 28ರಿಂದ ಅಲ್ಲಲ್ಲಿ ಮೋಡ ಹಾಗೂ 29ರಿಂದ ಒಣಹವೆ ಆವರಿಸುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 28ರಿಂದ ಮಳೆಯ ಪ್ರಮಾಣ ಕಡಿಮೆಯಾಗಿ, ಒಂದೆರಡು ದಿನಗಳ ಕಾಲ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣ ಇರಬಹುದು.
ನವೆಂಬರ್ 20,30 ರಂದು ದಕ್ಷಿಣ ಅಂಡಮಾನ್ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿದ್ದು, ಮುಂದಿನ ಹಂತ ಹಾಗೂ ಪಥವನ್ನು ಕಾದು ನೋಡಬೇಕಾಗಿದೆ.
No comments:
Post a Comment