Advertise

28 November 2026

29.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ :  ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಗಡಿ ಭಾಗಗಳ ಒಂದೆರಡು ಕಡೆ ರಾತ್ರಿ, ತಡ ರಾತ್ರಿ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 29ರಿಂದ ಮಳೆ ಕಡಿಮೆಯಾಗಿ, ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣ ಮುಂದುವರಿಯಲಿದ್ದು, ಡಿಸೆಂಬರ್ 2 ಹಾಗೂ 3ರಂದು ಮೋಡ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ. ಉಳಿದ ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 29ರಿಂದ ಬಿಸಿಲು ಹಾಗೂ ಸಣ್ಣ ಮೋಡದ ವಾತಾವರಣ ಇರಲಿದ್ದು, ಡಿಸೆಂಬರ್ 2 ಹಾಗೂ 3ರಂದು ಮೋಡ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ. 

ಉತ್ತರ ಒಳನಾಡು :ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 
ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಡಿಸೆಂಬರ್ 1ರಿಂದ ಮೋಡದ ಪ್ರಮಾಣ ಸ್ವಲ್ಪ ಹೆಚ್ಚಾಗುವ ನಿರೀಕ್ಷೆಗಳಿವೆ. 
ಮಳೆಯ ಲಕ್ಷಣಗಳಿಲ್ಲದಿದ್ದರೂ ಕಾದು ನೋಡಬೇಕಾಗಿದೆ. 

ನಿರೀಕ್ಷೆಯಂತೆ ಬಂಗಾಳಕೊಲ್ಲಿಯ ಗಾಳಿಯು ನೇರವಾಗಿ ದಕ್ಷಿಣಕ್ಕೆ ಚಲಿಸುತ್ತಿರುವುದರಿಂದ ರಾಜ್ಯದಲ್ಲಿ ಮಳೆ ಕಡಿಮೆಯಾಗಿದೆ. ಈಗ ಉತ್ತರ ಭಾರತ ಕಡೆಯಿಂದ ಗಾಳಿಯು ದಕ್ಷಿಣ ಭಾರತದ ಕಡೆಗೆ ಬೀಸುತ್ತಿದೆ. 
ಆದರೆ ಡಿಸೆಂಬರ್ 1ರಿಂದ ಮತ್ತೆ ಗಾಳಿಯ ದಿಕ್ಕು ಬದಲಾಗುತ್ತಿದ್ದು, ಬಂಗಾಳಕೊಲ್ಲಿಯ ಕಡೆಯಿಂದ ಅರಬ್ಬಿ ಸಮುದ್ರದ ಕಡೆಗೆ ಬೀಸುವಂತೆ ತೋರುತ್ತಿದೆ. ಇದರಿಂದ ರಾಜ್ಯದಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. ಮಳೆಯ ಲಕ್ಷಣಗಳಿಲ್ಲದಿದ್ದರೂ ಪರಿಸ್ಥಿತಿ ಕಾದು ನೋಡಬೇಕಾಗಿದೆ. 

No comments:

Post a Comment

29.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...